ಉಡುಪಿ: ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಉಡುಪಿ: ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 22 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು 1.3ರ ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ತಾತ್ಕಾಲಿಕ ಪರಿಶೀಲನಾ ಪಟ್ಟಿ(ಪಿವಿಎಲ್)ಯನ್ನು ಡಿ.20ರಂದು ಉಡುಪಿ ಜಿಲ್ಲಾ ವೆಬ್ಸೈಟ್ - udupi.nic.in-ನಲ್ಲಿ ಪ್ರಕಟಿಸಲಾಗುವುದು.
ಈ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ 2025ರ ಜನವರಿ 7ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ, ಜಿಲ್ಲಾದಿಕಾರಿ ಕಚೇರಿ, ರಜತಾದ್ರಿ, ಮಣಿಪಾಲ ಇಲ್ಲಿ ಹಾಜರಾಗಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ದೂರವಾಣಿ ಸಂಖ್ಯೆ: 0820-2574924/2574925ಕ್ಕೆ ಕರೆ ಮಾಡಿ ಆಡಳಿತ ಶಾಖೆಯನ್ನು ಸಂಪರ್ಕಿಸಬಹುದು ಎಂದು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story