ಕೊರಗ ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಣೆ
ಉಡುಪಿ, ಡಿ.24: ರಾಜೀವ ಗಾಂಧಿ ವಸತಿ ನಿಗಮದಿಂದ ಕೊರಗ ಸಮುದಾಯದ 10 ಫಲಾನುಭವಿಗಳಿಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಜೂರಾದ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರವನ್ನು ಇಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ಹಿರಿಯಡಕ ಶಾಸಕರ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಪಂ ಅಧ್ಯಕ್ಷ ಸಂದೀಪ, ಬೈರಂಪಳ್ಳಿ ಗ್ರಾಪಂ ಅಧ್ಯಕ್ಷ ಪ್ರಸಾದ್ ಮಲ್ಯ, ಕುಕ್ಕೆಹಳ್ಳಿ ಗ್ರಾಪಂ ಅಧ್ಯಕ್ಷ ಪುರಂದರ ಕೋಟ್ಯಾನ್, ಬೊಮ್ಮರಬೆಟ್ಟು ಗ್ರಾಪಂ ಸದಸ್ಯರಾದ ಸುನಿಲ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Next Story