ಮನೆಗೆನುಗ್ಗಿ ಲಕ್ಷಾಂತರ ರೂ. ಚಿನ್ನಾಭರಣ ಕಳವು
ಸಾಂದರ್ಭಿಕ ಚಿತ್ರ
ಬ್ರಹ್ಮಾವರ, ಡಿ.28: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಡಿ.26ರಂದು ರಾತ್ರಿ ವೇಳೆ ನಡೆದಿದೆ.
ನಡೂರು ಗ್ರಾಮದ ಬೇಬಿ ಎಂಬವರು ಮನೆಗೆ ಬೀಗ ಹಾಕಿ ಮನೆಯ ಸಮೀಪವಿರುವ ಶಾಲೆಯ ವಾರ್ಷಿಕೋತ್ಸವ ಹಾಗೂ ಕೋಲಾ ಕಾರ್ಯಕ್ರಮಕ್ಕೆ ಹೋಗಿದ್ದು, ಈ ವೇಳೆ ಮನೆಯ ಮುಖ್ಯ ದ್ವಾರದ ಬೀಗ ಮುರಿದು ಒಳನುಗ್ಗಿದ ಕಳ್ಳರು, 4,50,000ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story