ಸಂಘಸಂಸ್ಥೆಗಳಿಂದ ನಾಡಿನ ಸಂಸ್ಕೃತಿ ಉಳಿಸುವ ಕಾರ್ಯ ಅಗತ್ಯ: ಲಾಲಾಜಿ ಆರ್.ಮೆಂಡನ್
ಹಿರಿಯಡ್ಕ: ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರ ಉಳಿಸುವ ಹಾಗೂ ಬೆಳೆಸುವ ಕಾರ್ಯವನ್ನು ಸಂಘ ಸಂಸ್ಥೆಗಳು ಮಾಡ ಬೇಕು ಎಂದು ಕಾಪು ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಹೇಳಿದ್ದಾರೆ.
ಇತ್ತೀಚೆಗೆ ಅಂಜಾರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡುತಿ ದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಅಕಾಡೆಮಿಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಜಾನಪದ ವಿದ್ವಾಂಸ ಕೆ.ಎಲ್.ಕುಂಡಂತಾಯ, ಅಂಜಾರು ಮಠದ ಸೀತಾರಾಮ ಆಚಾರ್ಯ, ಕೊಡಿಬೆಟ್ಟು ಗ್ರಾಪಂ ಅಧ್ಯಕ್ಷ ಸಂದೀಪ ಮಡಿವಾಳ, ಉದ್ಯಮಿ ಸದಾನಂದ ಪ್ರಭು ಪೆರ್ಣಂಕಿಲ, ಸಂಧ್ಯಾ ಕಾಮತ್, ಗ್ರಾಪಂ ಸದಸ್ಯೆ ಯಶೋಧ ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಜಿಲ್ಲಾ ಮರಾಟಿ ಸಂಘದ ಮಾಜಿ ಅಧ್ಯಕ್ಷ ಅನಂತ ನಾಯ್ಕ್ ವಹಿಸಿದ್ದರು. ಸಂಘದ ಅಧ್ಯಕ್ಷ ವೆಂಕಟೇಶ್ ನಾಯ್ಕ್ ಸ್ವಾಗತಿಸಿದರು. ಉಪನ್ಯಾಸಕ ಮಹೇಶ್ ಆರ್ಡಿ ಕಾರ್ಯಕ್ರಮ ನಿರೂಪಿಸಿದರು.
Next Story