ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಉಡುಪಿ: ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿದೆ.
ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 22 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು 1:3 ಅನುಪಾತದಲ್ಲಿ ಮೂಲ ದಾಖಲೆ ಗಳ ಪರಿಶೀಲನೆಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡಿ.೨೦ ರಂದು ಉಡುಪಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ 2025ರ ಜನವರಿ7ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಹಾಜರಿರಬೇಕು.
ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲಾಧಿಕಾರಿ ಕಛೇರಿಯ ದೂರವಾಣಿ ಸಂಖ್ಯೆ: 0820-2574924, 2574925ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.