ಪ್ರೋತ್ಸಾಹ ಧನ: ಅರ್ಜಿ ಆಹ್ವಾನ
ಉಡುಪಿ, ಡಿ.೩೦: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು -https://sevasindhu.karnataka.gov.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
Next Story