ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ನೇಣುಕುಣಿಕೆಯಿಂದ ಬಿದ್ದು ಮೃತ್ಯು
ಮಣಿಪಾಲ, ಡಿ.30: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ನೇಣು ಕುಣಿಕೆ ತುಂಡಾಗಿ ಬಿದ್ದು ಮೃತಪಟ್ಟ ಘಟನೆ ಸೋಮವಾರ 80 ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಎಫ್.ಜೆ.ಎ.ಫೆರ್ನಾಂಡಿಸ್ ಎಂಬವರ ಮಗ ಮೆಲ್ರಾಯ್(55) ಎಂದು ಗುರುತಿಸಲಾಗಿದೆ. ಇವರು ಮನೆಯ ಮೊದಲ ಅಂತಸ್ತಿನ ಮೇಲ್ಛಾವಣೆಯ ಕಬ್ಬಿಣದ ಅಡ್ಡಪಟ್ಟಿಗೆ ನೇಣು ಬೀಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ನೇಣು ಕುಣಿಕೆಯಲ್ಲಿ ನರಳಾಡುತ್ತಿದ್ದಾಗ ಅವರ ದೇಹದ ಭಾರವು ನಿಯಂತ್ರಣ ಸಿಗದೆ, ಹಗ್ಗವು ತುಂಡಾಗಿ ಬಿತ್ತೆನ್ನಲಾಗಿದೆ.
ಇದರ ಪರಿಣಾಮ ಮೆಲ್ರಾಯ್ ಸುಮಾರು 20 ಅಡಿಗಿಂತಲೂ ಅಧಿಕ ಎತ್ತರದಿಂದ ಮನೆಯ ಹೊರಾಂಗಳದಲ್ಲಿ ಬಿದ್ದರು. ಇದರಿಂದ ತಲೆಗೆ ಗಂಭೀರ ಸ್ವರೂಪದ ಗಾಯಗೊಂಡ ಅವರು ಸ್ಥಳದಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story