ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಉಡುಪಿಗೆ ಭೇಟಿ
ಉಡುಪಿ, ಜ.9: ರಾಜ್ಯ ಸಹಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಜ.11 ಮತ್ತು 12ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಶನಿವಾರ ರಾತ್ರಿ 10:30 ಬೆಂಗಳೂರಿನಿಂದ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡುವ ಸಚಿವರು ಜ.12ರ ಬೆಳಗ್ಗೆ 10 ಗಂಟೆಗೆ ಕೋಟದಲ್ಲಿ ನಿರ್ಮಾಣಗೊಂಡಿರುವ ಮೂರ್ತದಾರರ ಸೇವಾ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸ್ವಂತ ಕಟ್ಟಡ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಎಸ್. ಬಂಗಾರಪ್ಪ ಸ್ಮಾರಕ ಸಭಾಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ಸಭಾ ಕಾರ್ಯಕ್ರಮವು ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಕೋಟದ ಶ್ರೀಶಾಂಭವಿ ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಅಪರಾಹ್ನ 2:30ಕ್ಕೆ ಸಚಿವರು ಕೋಟದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸುವರು.
Next Story