ಉಚಿತ ನೇತ್ರ ತಪಾಸಣಾ ಶಿಬಿರ
ಉಡುಪಿ: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ), ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಗ್ರಾಮ ಪಂಚಾಯತ್ ಬೊಮ್ಮರಬೆಟ್ಟು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಲಯನ್ಸ್ ಕ್ಲಬ್ ಹಿರಿಯಡಕ ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜನವರಿ 19ರಂದು ಬೆಳಗ್ಗೆ 10ರಿಂದ ಅಪರಾಹ್ನ 1 ಗಂಟೆಯವರೆಗೆ ಹಿರಿಯಡಕದ ಕೊಂಡಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
Next Story