ಸ್ಟಾಫ್ ನರ್ಸ್ ಹುದ್ದೆ: ಅರ್ಜಿ ಆಹ್ವಾನ
ಉಡುಪಿ, ಜ.15: ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಪಿಯುಸಿ/ ಇಂಟರ್ ಜೊತೆಗೆ ಡಿಪ್ಲೋಮಾ ಇನ್ ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫರಿ (3 ವರ್ಷಗಳು) ಮಾನ್ಯತೆ ಪಡೆದ ಮಂಡಳಿಯಿಂದ ಪೂರ್ಣಕಾಲಿಕ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿ ಗಳಿಂದ ನಾಲ್ಕು ವರ್ಷಗಳ ಅವಧಿಗೆ ಅಧಿಕಾರಾವಧಿ ಆಧಾರದ ಮೇಲೆ ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-22323005 (ಎಚ್‌ಎಎಲ್ ಬೆಂಗಳೂರು) ಅಥವಾ ಉದ್ಯೋಗ ವಿನಿಮಯ ಕಛೇರಿ ದೂ.ಸಂಖ್ಯೆ: 0820-2574869ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story