ಮಣಿಪಾಲ| ಯುವಕನೊಂದಿಗೆ ಅಸಭ್ಯ ವರ್ತನೆ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ಮಣಿಪಾಲ, ಎ.1: ಯುವಕನೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಮಣಿಪಾಲ ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಮಾ.27ರಂದು ಮಣಿಪಾಲ ಪೊಲೀಸ್ ಕಾನ್‌ಸ್ಟೇಬಲ್ ಶರಣ ಬಸವ ಎಂಬಾತ ಸಾರ್ವಜನಿಕವಾಗಿ ಸುಮಂತ್ ಎಂಬವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ಸುಮಂತ್ ಪೊಲೀಸ್ ಇಲಾಖೆಯ ಗಮನಕ್ಕೆ ತಂದು ಯಾವುದೇ ದೂರು ಬೇಡ ಎಂದು ತಿಳಿಸಿದ್ದರು.
ಆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಸ್ವಯಂ ಪ್ರೇರಿತವಾಗಿ ಶರಣ ಬಸವ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ. 92(ಓ)ಆ್ಯಂಡ್(ಆರ್) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಹಾಗೂ ಈ ಬಗ್ಗೆ ಸೂಕ್ತ ಇಲಾಖಾ ವಿಚಾರಣೆ ನಡೆಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
Next Story