ಪ್ರಚೋದನಕಾರಿ ಭಾಷಣ| ಪ್ರಮೋದ್ ಮಧ್ವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಪ್ರಮೋದ್ ಮಧ್ವರಾಜ್
ಉಡುಪಿ, ಎ.2: ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಾ.22ರಂದು ಮಲ್ಪೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಸ್ವಯಂ ಪ್ರೇರಿತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕ ಸದಸ್ಯ ಪೀಠ, ಮುಂದಿನ ವಿಚಾರಣೆಯ ದಿನಾಂಕದವರೆಗೆ ಪ್ರಮೋದ್ ಮಧ್ವರಾಜ್ ವಿರುದ್ಧ ತನಿಖೆಯನ್ನು ತಡೆಹಿಡಿದು ಆದೇಶ ನೀಡಿದೆ. ಪ್ರಮೋದ್ ಮಧ್ವರಾಜ್ ಪರವಾಗಿ ನ್ಯಾಯವಾದಿ ದಳವಾಯಿ ವೆಂಕಟೇಶ್ ವಾದಿಸಿದ್ದರು.
Next Story