ಟಿಪ್ಪರ್- ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು, ಸಹಸವಾರ ಗಂಭೀರ

ಬ್ರಹ್ಮಾವರ, ಎ.4: ಟಿಪ್ಪರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಸಂಜೆ ಪೇತ್ರಿ ಜಂಕ್ಷನ್ನಲ್ಲಿ ನಡೆದಿದೆ.
ಮೃತರನ್ನು ಸಾಸ್ತಾನ ನಿವಾಸಿ ದೀಕ್ಷಿತ್(24) ಎಂದು ಗುರುತಿಸಲಾಗಿದೆ. ಸಹ ಸವಾರ ಅಭಿಷೇಕ್ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಸ್ಕೂಟರ್ನಲ್ಲಿ ಹೆಬ್ರಿ ಸಮೀಪದ ಕೂಡ್ಲು ಪಾಲ್ಸ್ಗೆ ತೆರಳಿದ್ದು, ಅಲ್ಲಿ ಜಲಪಾತದಲ್ಲಿ ಆಡಿ ವಾಪಾಸ್ಸು ಸಾಸ್ತಾನಕ್ಕೆ ಹೋಗುತ್ತಿರುವಾಗ ಟಿಪ್ಪರ್ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಇಬ್ಬರು ಗಾಯ ಗೊಂಡರು. ಇದರಲ್ಲಿ ಗಂಭೀರ ಗಾಯಗೊಂಡ ದೀಕ್ಷಿತ್ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story