ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

ಶಂಕರನಾರಾಯಣ, ಎ.12: ವಿಪರೀತ ಮದ್ಯಪಾನ ಮಾಡುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದ ಹೆಂಗವಳ್ಳಿ ಗ್ರಾಮದ ರುದ್ರ ಎಂಬವರ ಮಗ ಸುದರ್ಶನ್(25) ಎಂಬವರು ಎ.11ರಂದು ಮಧ್ಯಾಹ್ನ ಮನೆಯ ಕೊಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಕೊಳಚೂರು ನಿವಾಸಿ ಹರೀಶ್(41) ಎಂಬವರು ಎ.10ರಂದು ಮಧ್ಯಾಹ್ನ ವೇಳೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿಪರೀತ ಮದ್ಯಪಾನ ಮಾಡುವ ಚಟವನ್ನು ಹೊಂದಿದ್ದ ಕಲ್ಮಾಡಿ ಚರ್ಚ್ ಬಳಿ ವಾಸ ಮಾಡಿ ಕೊಂಡಿದ್ದ ನಿಂಗಪ್ಪಧರ್ಮಣ್ಣ ಹುಲ್ಲಿಕೇರಿ(45) ಎಂಬವರು ಇದೇ ಕಾರಣದಿಂದ ಮನನೊಂದು ಎ.11ರಂದು ಸಂಜೆ ವೇಳೆ ನಗರದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.