ಓಮ್ನಿ ಕಾರು ಢಿಕ್ಕಿ: ಪಾದಚಾರಿ ಮೃತ್ಯು

ಕುಂದಾಪುರ, ಎ.18: ಓಮ್ನಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರದ ವಡೇರ ಹೋಬಳಿ ಸ್ಪೂರ್ತಿ ವೆಲ್ಡಿಂಗ್ ಮತ್ತು ವುಡ್ ವರ್ಕ್ಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.17ರಂದು ರಾತ್ರಿ 8ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಚಂದ್ರ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅನುಸೂಯ ಮತ್ತು ರಮಾಮಣಿ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಂದೂರು ಕಡೆಯಿಂದ ಉಡುಪಿ ಕಡೆಗೆ ಹೋಗು ತ್ತಿದ್ದ ಓಮ್ನಿ ಕಾರು, ರಸ್ತೆ ಬದಿ ನಿಂತುಕೊಂಡಿದ್ದ ಚಂದ್ರ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಕೋಟೇಶ್ವರದ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story