ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಮೃತ್ಯು

ಶಿರ್ವ, ಎ.22: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಬಳಿ ಎ.20ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶಿರಸಿ ತಾಲೂಕಿನ ಸತ್ಯನ್(53) ಎಂದು ಗುರುತಿಸಲಾಗಿದೆ. ಮೆಡಿಕಲ್ ಸಲಕರಣೆಗಳ ವ್ಯವಹಾರ ಮಾಡಿಕೊಂಡಿದ್ದ ಇವರು ಮುಂಬೈ ಯಿಂದ ಮಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹೋಗುತ್ತಿದ್ದರು. ದಾರಿ ಮಧ್ಯೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಸತ್ಯನ್ ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story