ಉಡುಪಿ ಸರಕಾರಿ ಕಾಲೇಜಿನಿಂದ ಎನ್ನೆಸ್ಸೆಸ್ ವಿಶೇಷ ಶಿಬಿರ
ಉಡುಪಿ, ಅ.21: ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಇವರ 2023-24ನೆ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವು ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಮಾತ ನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಎನ್‌ಎಸ್‌ಎಸ್ ಸಹಕಾರಿ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ವಹಿಸಿದ್ದರು. ಎನ್‌ಎಸ್‌ಎಸ್ ಶಿಬಿರಾಧಿಕಾರಿ ಪರಮೇಶ್ವರ ವರದಿ ವಾಚಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಗ್ರಾಪಂ ಸದಸ್ಯ ಶ್ರೀಕಾಂತ್ ನಾಯಕ, ಪೋಷಕರ ಸಮಿತಿಯ ಅಧ್ಯಕ್ಷ ಸಂತೋಷ ಶೆಟ್ಟಿಗಾರ್, ಉಪನ್ಯಾಸಕ ಕೃಷ್ಣಾನಂದ, ಸಹ ಶಿಬಿರಾಧಿಕಾರಿಗಳಾದ ನಾಗರಾಜ, ಸುಮನಾ ಮೊದಲಾದವರು ಉಪಸ್ಥಿತರಿದ್ದರು.
ಶಿಬಿರ ಉದ್ಘಾಟನೆ: ಶಿಬಿರವನ್ನು ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯತೀಶ್ ಕುಮಾರ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಶಾಂತಿನಿಕೇತನ ಶಾಲಾ ಸಂಚಾಲಕ ಅಲೆವೂರು ದಿನೇಶ್ ಕಿಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಯಾನಂದ ಬೆಣ್ಣೂರ್ ಉಪಸ್ಥಿತರಿದ್ದರು. ಏಳು ದಿನಗಳ ಕಾಲ ನಡೆದ ಶಿಬಿರದಲ್ಲಿ 50 ವಿದ್ಯಾರ್ಥಿಗಳು ಗ್ರಾಮದಲ್ಲಿ ಶ್ರಮದಾನ ಕಾರ್ಯದಲ್ಲಿ ತೊಡಗಿಸಿ ಕೊಂಡರು.