ಪಡುಬಿದ್ರೆ | ಹಿಟ್ ಆ್ಯಂಡ ರನ್: ಪಾದಚಾರಿ ಮೃತ್ಯು
ಪಡುಬಿದ್ರೆ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಉಚ್ಚಿಲದಲ್ಲಿ ನಡೆದಿದೆ.
ಮೃತರನ್ನು ಹಾವೇರಿ ಮೂಲದ ಮಂಜುನಾಥ್ (48) ಎಂದು ಗುರುತಿಸಲಾಗಿದೆ.
ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಇಲ್ಲಿ ನಿರಂತರ ಅಪಘಾತಗಳು ಸಂಭವಿಸುತ್ತಿವೆ. ಕಳೆದೊಂದು ತಿಂಗಳಲ್ಲಿ ಹಲವು ಅಪಘಾತಗಳು ಸಂಭವಿಸಿದ್ದು, ಈ ಪೈಕಿ ಆರು ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Next Story