ಪಡುಬಿದ್ರೆ | ಸಾಲದ ಚಿಂತೆ: ಯುವಕ ಆತ್ಮಹತ್ಯೆ
ಪಡುಬಿದ್ರೆ: ಸಾಲದ ಚಿಂತೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ.
ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಸಾಲದ ಚಿಂತೆಯಲ್ಲಿದ್ದರೆನ್ನಲಾಗಿದೆ.
ಮನೆಯಲ್ಲಿದ್ದ ಸಮಯದಲ್ಲಿ ಸಾಲ ಕೊಟ್ಟ ಬ್ಯಾಂಕ್ ನವರು, ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರೆನ್ನಲಾಗಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದರು. ಬುಧವಾರ ಬೆಡ್ ರೂಂನಲ್ಲಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story