ಐತಿಹಾಸಿಕ ಸ್ಥಳಗಳ ರಕ್ಷಣೆ ಜೊತೆ ಸ್ವಚ್ಛತೆ ಕಾಪಾಡುವುದು ಅಗತ್ಯ: ಎಚ್.ವಿ.ಇಬ್ರಾಹಿಂಪುರ
ಬ್ರಹ್ಮಾವರ, ಸೆ.29: ಐತಿಹಾಸಿಕ ಸ್ಥಳಗಳ ರಕ್ಷಣೆ ಮಾಡುವುದರೊಂದಿಗೆ ನಿರಂತರವಾಗಿ ಸ್ವಚ್ಛತೆಯನ್ನು ಕಾಪಾಡಿಕೊ ಳ್ಳುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯ ನಿರ್ವ ಹಣಾಧಿಕಾರಿ ಎಚ್.ವಿ.ಇಬ್ರಾಹಿಂಪುರ ಹೇಳಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್ ಮಾರ್ಗದರ್ಶನದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಪ್ರಯುಕ್ತ ಬಾರಕೂರು, ಹನೇಹಳ್ಳಿ ಹಾಗೂ ಯಡ್ತಾಡಿ ಗ್ರಾಮ ಪಂಚಾಯತ್‌ಗಳ ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಜ್ಞಾವಿಧಿ ಸ್ವೀಕಾರ, ಶ್ರಮದಾನ, ಮಾನವ ಸರಪಳಿ ಮತ್ತು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.
ಬ್ರಹ್ಮಾವರ ತಾಪಂ ಸಹಾಯಕ ನಿರ್ದೇಶಕ ಮಹೇಶ್ ಕೆ. ಮಾತನಾಡಿ, ’ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮದ ಹಿನ್ನೆಲೆ ಯಲ್ಲಿ ಉಡುಪಿ ಜಿಪಂ ವತಿಯಿಂದ ಜಲ ಮೂಲಗಳ ಸ್ವಚ್ಛತೆ, ಐತಿಹಾಸಿಕ ಪ್ರದೇಶಗಳ ಸ್ವಚ್ಛತೆ, ರಾಷ್ಟ್ರೀಯ ಹೆದ್ದಾರಿ ಮತ್ತು ಬೀಚ್‌ಗಳ ಸ್ವಚ್ಛತೆ ಸೇರಿದಂತೆ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಚಟುವಟಿಕೆಗಳಿಗೆ ಸೂಚನೆ ನೀಡಲಾಗಿದೆ. ಸಂಘ ಸಂಸ್ಥೆಗಳು ಮತ್ತು ನಾಗರಿಕರು ಸಹಕಾರ ನೀಡಬೇಕು ಎಂದು ತಿಳಿಸಿದರು.
ಬಾರಕೂರು ಗ್ರಾಪಂ ಉಪಾಧ್ಯಕ್ಷ ಶಾಂತಾರಾಮ ಶೆಟ್ಟಿ, ಯಡ್ತಾಡಿ ಗ್ರಾಪಂ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಮಾತನಾಡಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಬಾರಕೂರು ರೋಟರಿಯ ಸೀತಾರಾಮ ಶೆಟ್ಟಿ, ಹನೇಹಳ್ಳಿ ಗ್ರಾಪಂ ಅಧ್ಯಕ್ಷೆ ಮಲ್ಲಿಕಾ ಪೂಜಾರಿ, ಉಪಾಧ್ಯಕ್ಷ ಚಂದ್ರ ಮರಕಾಲ, ಪಿಡಿಓಗಳು, ಜಿಪಂ ಸಮಾಲೋಚಕ ಪ್ರದೀಪ್, ಬಾರ್ಕೂರು ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹನೇಹಳ್ಳಿ ಗ್ರಾಪಂ ಅಧಿಕಾರಿ ಅರುಂಧತಿ ಸ್ವಾಗತಿಸಿದರು. ಬಾರ್ಕೂರು ಪಿಡಿಒ ವಂದನಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ದರು. ನಿವೃತ್ತ ಶಿಕ್ಷಕ ಸುಧಾಕರ ಶೆಟ್ಟಿ ವಂದಿಸಿದರು. ಬಾರ್ಕೂರು ಸತೀಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಸ್ವಚ್ಚತಾ ಶ್ರಮದಾನ, ಜಾಥಾ ಮತ್ತು ಮಾನವ ಸರಪಳಿ ಕಾರ್ಯ ಚಟುವಟಿಕೆ ಗಳನ್ನು ಜರಗಿಸಲಾಯಿತು.