ಉಡುಪಿ: ಹೊರದೇಶದಲ್ಲಿ ಕನ್ನಡ ಬೆಳೆಸಿದ ದೀಪಕ್ ಶೆಟ್ಟಿಗೆ ರಾಜ್ಯೋತ್ಸವ ಪ್ರಶಸ್ತಿ
ಉಡುಪಿ, ಅ.31: ಕಳೆದ 23 ವರ್ಷಗಳಿಂದ ಕತರ್ ದೇಶದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿಸಿ ಕೊಂಡಿರುವ ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ಚುಚಿಯ ದೀಪಕ್ ಶೆಟ್ಟಿ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.
ಕರ್ನಾಟಕ ಸಂಘ ಕತರ್ ಇದರ ಅಧ್ಯಕ್ಷರಾಗಿ ಇವರು ಹಲವಾರು ಕನ್ನಡ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಹೊರದೇಶದಲ್ಲಿ ಕನ್ನಡ ಬೆಳೆಸಲು ಸಾಕಷ್ಟು ಶ್ರಮ ವಹಿಸಿದ್ದಾರೆ. ಬಂಟ್ಸ್ ಕತಾರ್ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಇವರನ್ನು, ಅಲ್ಲಿನ ರಾಯಭಾರಿ ಕಚೇರಿಯು ಎರಡು ಬಾರಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಿತ್ತು. ಪ್ರಸ್ತುತ ಇವರು ಭಾರತೀಯ ರಾಯಭಾರಿ ಕಚೇರಿಯ ಅಧೀನದಲ್ಲಿರುವ ಇಂಡಿಯನ್ ಕಮ್ಯುನಿಟಿ ಬೆನೆವೊಲೆಂಟ್ ಫೋರಂನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Next Story