Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಕಲಿ ಹಿಂದುಗಳ ಸೊಂಟ ಮುರಿದರೆ ನಿಜವಾದ...

ನಕಲಿ ಹಿಂದುಗಳ ಸೊಂಟ ಮುರಿದರೆ ನಿಜವಾದ ಹಿಂದುಗಳಿಗೆ ನ್ಯಾಯ ಸಿಗಲು ಸಾಧ್ಯ: ಯಶ್‌ಪಾಲ್ ಸುವರ್ಣ

ವಕ್ಫ್ ವಿವಾದ ವಿರೋಧಿಸಿ ಬಿಜೆಪಿಯಿಂದ ಡಿಸಿ ಕಚೇರಿ ಮುತ್ತಿಗೆ ಯತ್ನ

ವಾರ್ತಾಭಾರತಿವಾರ್ತಾಭಾರತಿ6 Nov 2024 1:58 PM IST
share
Photo of Bjp Protest

ಉಡುಪಿ: ಸಂವಿಧಾನ ವಿರುದ್ಧವಾಗಿ ರಚಿಸಿರುವ ವಕ್ಫ್ ಕಾಯಿದೆಯಿಂದ ರೈತರು ಭೂಮಿ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಹಿಂದು ಧಾರ್ಮಿಕ ಕೇಂದ್ರಗಳ ಆರ್‌ಟಿಸಿಯಲ್ಲಿ ವಕ್ಫ್ ಹೆಸರು ಬರುತ್ತಿದೆ. ಇದು ಹಿಂದುಗಳನ್ನು ಧಮನಿಸುವ ಷಡ್ಯಂತ್ರ ಆಗಿದೆ. ಇದರಲ್ಲಿ ಕೇವಲ ಕಾಂಗ್ರೆಸ್ ಸರಕಾರ ಮಾತ್ರವಲ್ಲ ನಕಲಿ ಹಿಂದುಗಳು ಕೂಡ ಭಾಗಿಗಳಾಗಿದ್ದಾರೆ. ಮೊದಲು ಅವರೊಂದಿಗೆ ಸೇರಿ ಕೊಂಡಿರುವ ನಕಲಿ ಹಿಂದುಗಳ ಸೊಂಟ ಮುರಿಯ ಬೇಕಾಗಿದೆ. ಈ ಮೂಲಕ ಹಿಂದುಗಳು ಏನು ಎಂಬುದನ್ನು ತೋರಿಸಿಕೊಟ್ಟಾಗ ಈ ಹೋರಾಟಕ್ಕೆ ನಿಜವಾದ ನ್ಯಾಯ ಸಿಗುತ್ತದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಕೇವಲ ಪ್ರತಿಭಟನೆಯಲ್ಲಿ ಮಾತ್ರ ನಮಗೆ ನ್ಯಾಯ ಸಿಗಲು ಸಾಧ್ಯ ಇಲ್ಲ. ಎಲ್ಲ ಹಿಂದುಗಳು ಒಟ್ಟಾಗಿ ವಿರಮಿಸದೆ ಹೋರಾಟ ಮಾಡಬೇಕು. ಇಲ್ಲದಿದ್ದರೆ ನಮ್ಮ ದೇಶ ಹಿಂದೂ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಹಿಂದು ಮನೆಯಿಂದ ಹೊರಗೆ ಬಂದು ಹೋರಾಟ ನಡೆಸಿದರೆ ಮಾತ್ರ ಹಿಂದುಗಳು ನೆಮ್ಮದಿ ಬದುಕು ನಡೆಸಲು ಸಾಧ್ಯ ಎಂದರು.

ಬಳಿಕ ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಲು ಯತ್ನಿಸಿದ ಶಾಸಕ ಯಶ್‌ಪಾಲ್ ಸುವರ್ಣ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ತಳ್ಳಾಟ ನಡೆಯಿತು. ಬಳಿಕ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಎಲ್ಲರನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಹೊರ ಕಳುಹಿಸಿದರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮುಖಂಡರಾದ ಸತೀಶ್ ಶೆಟ್ಟಿ ಮುಟ್ಲುಪಾಡಿ, ವೀಣಾ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಗೀತಾಂಜಲಿ ಸುವರ್ಣ, ಶ್ಯಾಮಲಾ ಕುಂದರ್, ಪೃಥ್ವಿರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು̤


Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X