ಎಸ್.ಆರ್.ರಂಗನಾಥನ್ ಜನ್ಮದಿನಾಚರಣೆ, ಗ್ರಂಥಪಾಲಕರ ದಿನಾಚರಣೆ
ಉಡುಪಿ, ಆ.12: ಭಾರತದ ಗ್ರಂಥಾಲಯ ವಿಜ್ಞಾನ ಪಿತಾಮಹ ಡಾ.ಎಸ್. ಆರ್.ರಂಗನಾಥನ್ ಅವರ ಜನ್ಮದಿನವನ್ನು ಗ್ರಂಥಪಾಲಕರ ದಿನ ಹಾಗೂ ಗ್ರಂಥಾಲಯ ದಿನವಾಗಿ ಉಡುಪಿ ಎಂಜಿಎಂ ಕಾಲೇಜಿನ ಗ್ರಂಥಾಲಯದಲ್ಲಿ ಇಂದು ಆಚರಿಸಲಾಯಿತು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷೀನಾರಾಯಣ ಕಾರಂತ್ ಗ್ರಂಥಾಲಯದ ಮಹತ್ವದ ಬಗ್ಗೆ ಹಾಗೂ ಗ್ರಂಥಾಲಯಗಳ ವ್ಯವಸ್ಥಿತ ನಿರ್ವಹಣೆಯ ಬಗ್ಗೆ ಡಾ.ಎಸ್.ಆರ್.ರಂಗನಾಥನ್ ಅವರ ಕೊಡುಗೆಗಳನ್ನು ಸ್ಮರಿಸಿ ದರು. ಮುಖ್ಯ ಅತಿಥಿಯಾಗಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಎ. ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಲು ಕರೆ ನೀಡಿದರು.
ದಿನಾಚರಣೆಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ವಿನೀತ್ ರಾವ್, ಗ್ರಂಥಾಲಯಗಳ ವಿಕಾಸ, ಗ್ರಂಥಾ ಲಯ ವಿಜ್ಞಾನದ ಪಂಚತತ್ವಗಳ ಮಹತ್ವ ಹಾಗೂ ಗ್ರಂಥಪಾಲಕರ ಕೊಡುಗೆ ಬಗ್ಗೆ ಮಾತನಾಡಿದರು. ಗ್ರಂಥಪಾಲಕ ಕಿಶೋರ್ ಎಚ್.ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಗ್ರಂಥಾಲಯ ಸಹಾಯಕಿ ಗುಣವತಿ ನಿರೂಪಿಸಿ ವಂದಿಸಿದರು.