ಉಡುಪಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಉಡುಪಿ, ಆ.2: ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವತಿಯಿಂದ 2022/2023ನೆ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಜಿಲ್ಲೆಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉಡುಪಿ ಶೋಕಾ ಮಾತಾ ಇಗರ್ಜಿಯ ಮಿನಿ ಹಾಲ್ ನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಚರ್ಚಿನ ಧರ್ಮಗುರು ಹಾಗೂ ವೇದಿಕೆಯ ಸಲಹೆಗಾರ ವಂ.ಫಾ.ಚಾರ್ಲ್ಸ್ ಮಿನೇಜಸ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿಯ ಹಾಶಿಮಿ ಮಸೀದಿಯ ಇಮಾಮ್ ಹಾಗೂ ಖತೀಬ್ ಓಭೆದುರ್ ರೆಹೆಮಾನ್ ನದ್ವಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಯೋಗ್ಯತಾ ಪತ್ರ ನೀಡಿ ಗೌರವಿಸಲಾಯಿತು.
ವೇದಿಕೆಯ ಅಧ್ಯಕ್ಷ ರೋಬರ್ಟ್ ಮಿನೇಜಸ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಖಜಾಂಚಿ ಸೆವ್ರಿನ್ ಡೆಸಾ ಉಪಸ್ಥಿತರಿದ್ದರು. ಕಾರ್ಯದರ್ಶಿ ಕಾಸಿಂ ಬಾರಕೂರು ವಂದಿಸಿದರು. ಎಂ.ಎಸ್.ಖಾನ್ ಕಾರ್ಯಕ್ರಮ ನಿರೂಪಿಸಿದರು.
Next Story