ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ, ಆ.30: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಸ್ಪರ್ಧಾತ್ಮಕ ಪರೀಕ್ಷೆಗಳು ಸೆಪ್ಟಂಬರ್ 3ರ ರವಿವಾರದಂದು ಜಿಲ್ಲೆಯ ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರ ಗಳ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
Next Story