ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಪುನರಾರಂಭ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ
ಡಾ.ಕೆ.ವಿದ್ಯಾಕುಮಾರಿ
ಉಡುಪಿ, ಸೆ.5: ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕಿದ್ದ ನಿಷೇಧವನ್ನು ಹಿಂದೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169 ಎ ಮಲ್ಪೆ - ತೀರ್ಥಹಳ್ಳಿ ರಸ್ತೆಯ ಆಗುಂಬೆ ಘಾಟಿಯಲ್ಲಿ 6,7 ಮತ್ತು 11ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ರಸ್ತೆ ಹಾಗೂ ಭೂಕುಸಿತ ಕಂಡುಬಂದಿದ್ದು, ಇದರಿಂದ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದರು. ಇದೀಗ ಆದೇಶವನ್ನು ಹಿಂಪಡೆದು, ಭಾರೀ ವಾಹನಗಳ ಸಂಚಾರಕ್ಕೆ ಈ ಮಾರ್ಗದಲ್ಲಿ ಅನುವು ಮಾಡಿ ಆದೇಶ ಹೊರಡಿಸಿದ್ದಾರೆ.
Next Story