ಸೆ.10ಕ್ಕೆ ತರಬೇತುದಾರರ ತರಬೇತಿ ಕಾರ್ಯಾಗಾರ
ಉಡುಪಿ, ಸೆ.6: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯ ದಲ್ಲಿ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ನೀತಿಗೆ ಸಂಬಂಧಪಟ್ಟ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅನುಷ್ಠಾನಾಧಿಕಾರಿಗಳಿಗೆ ಒಂದು ದಿನದ ತರಬೇತುದಾರರ ತರಬೇತಿ ಕಾರ್ಯಾಗಾರವು ಸೆ.10ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಪುರುಷೋತ್ತಮ,2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಜಿಲ್ಲಾ ಬಾಲನ್ಯಾಯ ಮಂಡಳಿಯ ಪ್ರಧಾನ ನ್ಯಾಯಾಧೀಶ ಮನು ಪಟೇಲ್ ಬಿ.ವೈ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಬಿ.ಪುರ್ಟಾಡೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನಿರ್ದೇಶಕಿ ಶ್ಯಾಮಲಾ ಸಿ.ಕೆ ಭಾಗವಹಿಸಲಿದ್ದಾರೆ.
ಯುನಿಸೆಫ್, ಮಕ್ಕಳ ಸಂರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಡಾ. ರಾಘವೇಂದ್ರ ಭಟ್ ಮತ್ತು ಬೆಂಗಳೂರು ಕ್ರೈಸ್ಟ್ ಯುನಿವರ್ಸಿಟಿಯ ಮನಶಾಸ್ತ್ರ ವಿಭಾಗದ ಸಹಾಯಕ ಭೋಧಕಿ ಡಾ.ವೀಣಾಶ್ರೀ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.