ಉಡುಪಿ: ಟ್ರೇಡಿಂಗ್ ಆ್ಯಪ್ ಮೂಲಕ 1.72 ಕೋಟಿ ರೂ. ವಂಚನೆ; ಪ್ರಕರಣ ದಾಖಲು
ಉಡುಪಿ: ಟ್ರೇಡಿಂಗ್ ಆ್ಯಪ್ ಮೂಲಕ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಕೋಟ್ಯಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳದ ಸುರೇಶ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಡಿ.19ರಂದು ವಾಟ್ಸ್ ಅಪ್ ಮೂಲಕ ಸಂಪರ್ಕಿಸಿ ಟ್ರೆಡಿಂಗ್‌ನಿಂದ ಹೆಚ್ಚಿನ ಲಾಭಾಂಶ ಪಡೆಯ ಬಹುದೆಂದು ಆಸೆ ತೋರಿಸಿ, ಟ್ರೆಡಿಂಗ್ ಆ್ಯಪ್ ಲಿಂಕ್ ಕಳುಹಿಸಿದ್ದರು. ಇದನ್ನು ನಂಬಿದ ಸುರೇಶ್, ಇದರಲ್ಲಿ ಹಣವನ್ನು ಹೂಡಿಕೆ ಮಾಡಲು ಆರೋಪಿಗಳು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 1.72ಕೋಟಿ ರೂ. ಹಣವನ್ನು ಪಾವತಿಸಿದ್ದರು. ಆದರೆ ಸುರೇಶ್ ಹೂಡಿಕೆ ಮಾಡಿದ ಹಣ ಅಥವಾ ಲಾಭಾಂಶವನ್ನು ನೀಡದೇ ಆರೋಪಿಗಳು ನಂಬಿಸಿ, ಮೋಸ ಮಾಡಿರುವುದಾಗಿ ದೂರಲಾಗಿದೆ.
Next Story