ಉಡುಪಿ: 7 ಗ್ರಾಪಂಗಳು ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆ
ಉಡುಪಿ, ಸೆ.27: ಕರ್ನಾಟಕ ಪಂಚಾಯತ್ರಾಜ್ ಇಲಾಖೆ ನೀಡುವ 2022-23ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ’ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಪ್ರತಿ ತಾಲೂಕಿನಿಂದ ಒಂದರಂತೆ ಒಟ್ಟು ಏಳು ಗ್ರಾಮ ಪಂಚಾಯತ್ಗಳು ಆಯ್ಕೆಯಾಗಿವೆ.
ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಪಂ, ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಪಂ, ಹೆಬ್ರಿ ತಾಲೂಕಿನ ಮಡಾಮಕ್ಕಿ ಗ್ರಾಪಂ, ಕಾಪು ತಾಲೂಕಿನ ಬೆಳ್ಳೆ ಗ್ರಾಪಂ, ಕಾರ್ಕಳ ತಾಲೂಕಿನ ನೀರೆ ಗ್ರಾಪಂ ಹಾಗೂ ಉಡುಪಿ ತಾಲೂಕಿನ ಅಲೆವೂರು ಗ್ರಾಪಂ ಈ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story