ಉಡುಪಿ ನಗರಸಭೆ ಪೌರ ಕಾರ್ಮಿಕ ಆತ್ಮಹತ್ಯೆ
ಉಡುಪಿ, ಅ.11: ಉಡುಪಿ ನಗರಸಭೆ ಪೌರ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಉಡುಪಿ ಪುತ್ತೂರು ಗ್ರಾಮದ ಕದ್ಮಲ್ ರಂಗರಾವ್ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ನಗರಸಭೆಯಲ್ಲಿ ಗುತ್ತೆಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೌರ ಕಾರ್ಮಿಕ ತನ್ನಿ(39) ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣದಿಂದ ಮನನೊಂದ ಇವರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತ ದೇಹವನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾದರು. ಉಡುಪಿ ನಗರ ಪೋಲಿಸ್ ಠಾಣೆಯ ಸುರೇಶ್ ಕೆ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು.
.
Next Story