ಸಂವಿಧಾನ ಬದಲಿಸುವ ಬಿಜೆಪಿಯ ಹುನ್ನಾರ ವಿಫಲಗೊಳಿಸಿ: ಸಿದ್ದರಾಮಯ್ಯ ಕರೆ
ಉಡುಪಿಯಲ್ಲಿ ಗ್ಯಾರಂಟಿ ಸಮಾವೇಶವನ್ನು ಉದ್ಘಾಟಿಸಿದ ಸಿಎಂ
ಉಡುಪಿ, ಮಾ.13: ದೇಶದ ಸಂವಿಧಾನವನ್ನು ಬದಲಿಸುವ ಹುನ್ನಾರವನ್ನು ಬಿಜೆಪಿ ನಡೆಸಿದೆ. ಇದು ಬಿಜೆಪಿಯ ಹಿಡನ್ ಅಜೆಂಡಾ ಆಗಿದ್ದು, ದೇಶದ ಜನ ಇದನ್ನು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಬುಧವಾರ ಮಹಾತ್ಮ ಗಾಂಧಿ ಮೈದಾನದಲ್ಲಿ ನಡೆದ ಗ್ಯಾರೆಂಟಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಂವಿಧಾನವನ್ನು ಬದಲಿಸುವುದಕ್ಕಾಗಿಯೇ ಅಧಿಕಾರಕ್ಕೆ ಬಂದಿರುವುದಾಗಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಇದೀಗ ಎರಡನೇ ಬಾರಿಗೆ ಹೇಳಿದ್ದಾರೆ. ಸಂವಿಧಾನದ ಬದಲು ಮನುಸ್ಮೃತಿ ಜಾರಿಗೊಳಿಸುವುದೇ ಬಿಜೆಪಿಯ ಹುನ್ನಾರ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಕಾರ್ಮಿಕರು, ಹಿಂದುಳಿದವರು ದೇಶದಲ್ಲಿ ಬದುಕಲು ಸಂವಿಧಾನ ಉಳಿಯಲೇ ಬೇಕು ಎಂದರು.
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಯೋಜನೆಗಳ ಶಂಕುಸ್ಥಾಪನೆ ಮಾಡಿದರು.
Next Story