ಅರಣ್ಯ, ಪೊಲೀಸ್ ಅಧಿಕಾರಿಗಳಿಗೆ ಉಡುಪಿ ಡಿಸಿ ಸೂಚನೆ
ಡಾ.ಕೆ.ವಿದ್ಯಾಕುಮಾರಿ
ಉಡುಪಿ, ಜು.24: ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರು ಹಾಗೂ ಸ್ಥಳೀಯರ ಕುರಿತಂತೆ ಅತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.
ಮುಂಗಾರು ಮಳೆಯಿಂದ ಉಂಟಾಗಬಹುದಾದ ಜನರ ಜೀವ, ಆಸ್ತಿ- ಪಾಸ್ತಿ ಹಾಗೂ ಜಾನುವಾರುಗಳ ಜೀವ ಹಾನಿಯಂಥ ಅನುಹುತಗಳನ್ನು ತಪ್ಪಿಸಲು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ನದಿ ತೀರ, ಸಮುದ್ರ ತೀರ, ಜಲಪಾತಗಳಂತಹ ಪ್ರೇಕ್ಷಣಿಯ ಸ್ಥಳಗಳಿಗೆ ಪ್ರವಾಸಿಗರು ಭೇಟಿ ನೀಡುವಾಗ ಅಗತ್ಯ ಮುಂಜಾಗ್ರತೆ ವಹಿಸದೇ ಅಪಾಯಕ್ಕೆ ಸಿಲುಕುವುದರಿಂದ, ಇಂತಹ ಪ್ರದೇಶಗಳಲ್ಲಿ ಅಪಾಯದ ಕುರಿತು ಜನರ ಗಮನ ಸೆಳೆಯುವ ನಿಟ್ಟಿಈನಲ್ಲಿ ಎಚ್ಚರಿಕೆ ಫಲಕ, ಪೊಲೀಸ್ ಕಾವಲು ಮತ್ತಿತರ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಯಾವುದೇ ರೀತಿಯ ಅವಘಟಗಳು ಸಂಭವಿಸದಂತೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.