ಅಭಿವೃದ್ಧಿ ಮೂಲಕ ಉಡುಪಿ ಜಿಲ್ಲೆ ಹೊಸ ಎತ್ತರಕ್ಕೆ ಸಂಕಲ್ಪ: ಸ್ವಾತಂತ್ರ್ಯೋತ್ಸವ ಸಂದೇಶದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ, ಆ.15: ಅಭಿವೃದ್ಧಿಯ ಮೂಲಕ ಉಡುಪಿ ಜಿಲ್ಲೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪವನ್ನು ಮಾಡಿರು ವುದಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಉಡುಪಿ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿ ಅವರು ಮಾತನಾಡುತಿದ್ದರು.
ಕಡಲುಕೊರೆತ, ತುರ್ತು ಕಾಲುಸಂಕ ನಿರ್ಮಾಣ ಸೇರಿದಂತೆ ಜಿಲ್ಲೆಯ ವಿಶಿಷ್ಟ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಗಮನ ಹರಿಸಿ ಇವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತಾನು ಎಲ್ಲಾ ರೀತಿಯ ಕ್ರಮಗಳನ್ನು ವಹಿಸುವುದಾಗಿ ಅವರು ಜಿಲ್ಲೆಯ ಜನತೆಗೆ ಭರವಸೆ ನೀಡಿದರು.
ಕೋಮು ಸಂಘರ್ಷಕ್ಕೆ ಕಾರಣವಾಗುವ ಜಾತಿ ಧರ್ಮ ಇವುಗಳನ್ನು ಮೀರಿ ನಿಂತು ಭಾರತೀಯರಾಗಿ ನಾವೆಲ್ಲರೂ ಒಂದೇ ಎಂಬ ದೇಶಪ್ರೇಮವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕಾಗಿದೆ. ಸಮಾಜದಲ್ಲಿ ಎಲ್ಲಾ ಧರ್ಮೀಯರು ಸಹೋದ ರಂತೆ ಸಾಮರಸ್ಯದ ಶಾಂತಿಯುತ ಬದುಕು ಸಾಗಿಸಲು ಪ್ರಯತ್ನಿಸಬೇಕು. ಶಾಂತಿ ನೆಮ್ಮದಿಗೆ ಭಂಗ ತರುವ ಎಲ್ಲಾ ಕೆಟ್ಟ ಶಕ್ತಿಗಳನ್ನು, ಪ್ರಯತ್ನಗಳನ್ನು ವಿಫಲಗೊಳಿಸುವುದು ನಮ್ಮ ಕರ್ತವ್ಯ ಎಂದರು.
ರಾಜ್ಯದಲ್ಲಿಂದು ಜನಪರವಾದ ಸರಕಾರವಿದೆ. ಸಮೃದ್ಧ ಕರ್ನಾಟಕ ನಿರ್ಮಾಣದ ಆಶಯದೊಂದಿಗೆ ನಾಡಿನ ಶ್ರೇಯೋಭಿ ವೃದ್ಧಿಗೆ ಇದು ಶ್ರಮಿಸುತ್ತಿದೆ. ಈ ಸರಕಾರ ಸಂವಿಧಾನದ ಆಶಯಗಳಂತೆ ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮ ಮೌಲ್ಯಗಳ ಹಾದಿಯಲ್ಲಿ ಕೆಲಸ ಮಾಡಲಾದಿ ಎಂದರು.
ಚುನಾವಣೆಯ ಸಂದರ್ಭದಲ್ಲಿಕೊಟ್ಟ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತರಲು ಕ್ರಮ ಕೈಗೊ ಳ್ಳಲಾಗಿದೆ. ಉಡುಪಿ ಜಿಲ್ಲೆ ಸಹಿತ ರಾಜ್ಯಾದ್ಯಂತ ಗ್ಯಾರಂಟಿಗಳಿಗೆ ವ್ಯಾಪಕ ಜನಬೆಂಬಲ ದೊರಕಿದೆ. ಈ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದರು.
ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ಶಕ್ತಿ ಯೋಜನೆ, ಹಸಿವು ಮುಕ್ತ ಕರ್ನಾಟದ ಉದ್ದೇಶದ ಅನ್ನ ಭಾಗ್ಯ ಯೋಜನೆ, 200 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಈಗಾಗಲೇ ಜಾರಿಗೊಂಡಿದೆ. ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ನೊಂದಣಿ ಈಗಾಗಲೇ ನಡೆಯುತಿದ್ದು, ಇದೇ ತಿಂಗಳ 27ರಿಂದ ಜಾರಿ ಗೊಳ್ಳಲಿದೆ ಎಂದರು.
ನಮ್ಮ ಸರಕಾರ ನುಡಿದಂತೆ ನಡೆಯುವ ಸರಕಾರ ಎಂಬುದನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ತೋರಿಸಿಕೊಟ್ಟಿದ್ದಾರೆ. ಐದು ಗ್ಯಾರಂಟಿಗಳ ಅನುಷ್ಠಾನಕ್ಕಾಗಿ 2023-24ನೇ ಸಾಲಿನ ಬಜೆಟ್ನಲ್ಲಿ 35,410 ಕೋಟಿ ರೂ. ಗಳನ್ನು ಮೀಸಲಿಟ್ಟಿ ರುವುದೇ ಇದಕ್ಕೆ ಸಾಕ್ಷಿ ಎಂದು ಸಚಿವೆ ನುಡಿದರು.
ಕೂಸಿನ ಮನೆ: ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಆರು ವರ್ಷದೊಳಗಿನ ಮಕ್ಕಳ ಆರೋಗ್ಯ, ಪೌಷ್ಠಿಕತೆ ಮತ್ತು ಸುರಕ್ಷತೆಗಾಗಿ ‘ಕೂಸಿನ ಮನೆ’ ಎಂಬ ಹೆಸರಿನಲ್ಲಿ 4,000 ಗ್ರಾಪಂಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಪ್ರಾರಂಭಿಸಲಾಗು ವುದು ಎಂದರು.
ಕೈಗಾರಿಕೆಗಳ ಸ್ಥಾಪನೆಗೆ ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಪರಿವರ್ತಿಸದೇ ಬಳ ಸಲು ಅವಕಾಶ ನೀಡಲಾಗುವುದು. ಇದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಲಾಗಿದೆ ಎಂದೂ ಅವರು ವಿವರಿಸಿದರು.
ನೇಕಾರರಿಗೆ ಉಚಿತ ವಿದ್ಯುತ್: 10ಎಚ್ಪಿವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ಮಾಸಿಕ ಗರಿಷ್ಠ 250 ಯೂನಿಟ್ವರೆಗೆ ಉಚಿತ ವಿದ್ಯುತ್ ಒದಗಿಸುವ ಮೂಲಕ ನೇಕಾರರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲು ಕ್ರಮ ವಹಿಸಲಾಗಿದೆ.
ಸರಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪೆನಿಗಳ ಸಹಯೋಗದೊಂದಿಗೆ ರಾಜ್ಯ ಸರಕಾರ ಉದ್ಯಮ ಶಕ್ತಿ ಎಂಬ ಯೋಜನೆ ಯಡಿ 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್ಗಳನ್ನು ಸ್ಥಾಪಿಸಿ ಅವುಗಳ ಸಂಪೂರ್ಣ ನಿರ್ವಹಣೆಯನ್ನು ಮಹಿಳಾ ಸ್ವಸಹಾಯ ಸಂಘಗಳಿಗೆ ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ನುಡಿದರು.
ಡಾಪ್ಲರ್ ವೆದರ್ರೀಡರ್: ರಾಜ್ಯದಲ್ಲಿ ಭಾರೀ ಮಳೆ, ಬಲವಾದ ಗಾಳಿ, ಪ್ರವಾಹದಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಡಾಪ್ಲರ್ ವೆದರ್ ರೀಡರ್ ಕಣ್ಗಾವಲು ಯಂತ್ರವನ್ನು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ ಸ್ಥಾಪಿಸಲಾಗುತ್ತಿದೆ ಎಂದು ಸಚಿವೆ ತಿಳಿಸಿದರು.
ಇದಕ್ಕೂ ಮುನ್ನ ಆಕರ್ಷಕ ಪಥಸಂಚಲನ ನಡೆಯಿತು. ಸಚಿವರ ಸಂದೇಶದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಅತ್ಯಾಕ ರ್ಷಕ ಹಾಡು-ನೃತ್ಯಗಳಿಂದ ಕೂಡಿದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ವಿಕಲಚೇತನ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್, ಬ್ರೈಲ್ ಕಿಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಎಸ್ಪಿ ಅಕ್ಷಯ್ ಎಂ.ಹಾಕೆ, ಜಿಪಂ ಸಿಇಓ ಪ್ರಸನ್ನ ಎಚ್., ಅಪರ ಜಿಲ್ಲಾಧಿಕಾರಿ ಮಮತಾದೇವಿ ಉಪಸ್ಥಿತರಿದ್ದರು.