ಆ.14 - 15ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಉಡುಪಿ, ಆ.13: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆ.14 ಮತ್ತು 15ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಆ.14ರಂದು ಮಧ್ಯಾಹ್ನ 12.15ಕ್ಕೆ ಉಡುಪಿ ತಾಪಂ ಆವರಣದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ಮಾರಾಟ ಕೇಂದ್ರ ಸಂಜೀವಿನಿ ಸೂಪರ್ ಮಾರ್ಕೆಟ್ ಉದ್ಘಾಟನೆ, ಮಧ್ಯಾಗ್ನ 1 ಗಂಟೆಗೆ ಜಿಪಂ ಸಂಪನ್ಮೂಲ ಕೇಂದ್ರದಲ್ಲಿ ಉಡುಪಿ ಜಿಲ್ಲಾ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿ ಗಳಿಗಾಗಿ ಸಿಇಟಿ/ಜೆಇಇ/ನೀಟ್ ಆನ್ಲೈನ್ ತರಬೇತಿಗೆ ಚಾಲನೆ, 2 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ, ಸಂಜೆ 4 ಗಂಟೆಗೆ ಕಾರ್ಕಳ ತಾಲೂಕು ಮುಡಾರು ಗ್ರಾಪಂ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಉಡುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿರುವರು.
ಆ.15ರಂದು ಬೆಳಗ್ಗೆ 8.30ರಿಂದ 11ರವರೆಗೆ ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಆಯೋಜಿ ಸಿರುವ ಸ್ವಾತಂತ್ರ್ಯೋತ್ಸವ ಸಮಾರಂಭದ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರು ವರು. ಮಧ್ಯಾಹ್ನ 12.30ಕ್ಕೆ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಪಂ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸ ಲಿರುವರು ಎಂದು ಪ್ರಕಟಣೆ ತಿಳಿಸಿದೆ.