ಆ. 31ರಂದು ಉಡುಪಿ ಜಿಲ್ಲಾ ಮಟ್ಟದ ಮ್ಯಾರಥಾನ್
ಉಡುಪಿ, ಆ.29: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಘಟಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಸಾಯಿರಾಧಾ ಗ್ರೂಪ್, ರಾಜ್ ಫಿಶ್‌ಮಿಲ್ ಮತ್ತು ಆಯಿಲ್ ಕಂಪೆನಿ ಮಲ್ಪೆ, ಆದರ್ಶ ಆಸ್ಪತ್ರೆ ಉಡುಪಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಮತ್ತು ರೋಟರಿ ಕ್ಲಬ್ ಉಡುಪಿ ಮಿಡ್‌ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ಹೆಚ್‌ಐವಿ/ ಏಡ್ಸ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ 5 ಕಿ.ಮೀ. ಮ್ಯಾರಥಾನ್ ಕಾರ್ಯಕ್ರಮವನ್ನು ಆ. 31ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಿಂದ ಆಯೋಜಿಸಲಾಗಿದೆ.
17ರಿಂದ 25 ವರ್ಷದೊಳಗಿನ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಪ್ರತಿ ಕಾಲೇಜಿನಿಂದ ಗರಿಷ್ಠ 4ರಂತೆ (ಮಹಿಳೆ-2, ಪುರುಷ-2) ಮ್ಯಾರಥಾನ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಮ್ಯಾರಥಾನ್‌ನಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಗೂಗಲ್ ಆನ್‌ಲೈನ್ ಲಿಂಕ್ ಮೂಲಕ ಆಗಸ್ಟ್ 30ರ ಸಂಜೆ 4 ಗಂಟೆಯ ಒಳಗೆ ಹೆಸರು ನೊಂದಾಯಿಸಿಕೊಳ್ಳಬಹುದು.
ಜಿಲ್ಲಾ ಮಟ್ಟದ ಸ್ಪರ್ಧೆಯ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಕರ್ಷಕ ನಗದು ಬಹುಮಾನ ನೀಡಲಾಗುವುದು. ಜಿಲ್ಲಾ ಮಟ್ಟದ 5 ಕಿ.ಮೀ. ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ಮಹಾಬಲೇಶ್ವರ, ಜಿಲ್ಲಾ ವ್ಯವಸ್ಥಾಪಕರು ಮೊ.ನಂ:9480579398, 9449846988 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.