ಉಡುಪಿ: ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ, ನ.9: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ಎನ್‌ಸಿಡಿ ವಿಭಾಗ, ಜಿಲ್ಲಾ ಸರ್ವೇಕ್ಷಣ ಘಟಕ ಎನ್‌ಸಿಡಿ, ಸಮುದಾಯ ವೈದ್ಯಕೀಯ ವಿಭಾಗ ಹಾಗು ದಂತ ವೈದಕೀಯ ವಿಭಾಗ ಮಣಿಪಾಲ್, ಪ್ರಸಾದ್ ನೇತ್ರಾಲಯ ಉಡುಪಿ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರ ಇಂದು ಉಡುಪಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಜರಗಿತು.
ಕಾರ್ಯಕ್ರಮವನ್ನು ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಈಶ್ವರಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಎನ್‌ಸಿಡಿ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ತಜ್ಞೆ ಡಾ ಹರ್ಷಿತ, ಕೆಎಂಸಿ ಮಣಿಪಾಲದ ಇಎನ್‌ಟಿ ತಜ್ಞೆ ಡಾ.ದೇವಯಾನಿ, ಚರ್ಮರೋಗ ತಜ್ಞ ಡಾ.ಅಕ್ಷತ್, ದಂತ ತಜ್ಞೆ ಡಾ.ರೀತು ಶರ್ಮ, ಪ್ರಸಾದ್ ನೇತ್ರಾಲಯದ ನೇತ ತಜ್ಞ ಡಾ.ಗುರುಪ್ರಸಾದ್ ಉಪಸ್ಥಿತರಿದ್ದರು.
ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸುಮ ಅಕ್ಕ ಅಧ್ಯಕ್ಷತೆ ವಹಿಸಿದ್ದರು. ಆಪ್ತಸಮಾಲೋಚಕ ಮನು ಎಸ್.ಬಿ ಅಸಾಂಕ್ರಾಮಿಕ ರೋಗಗಳ ಕುರಿತು ಮಾತನಾಡಿದರು.
ಶಿಬಿರದಲ್ಲಿ ಮಧುಮೇಹ, ರಕ್ತಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ದಂತ ಪರೀಕ್ಷೆ, ಕಣ್ಣಿನ ಪರೀಕ್ಷೆ, ಇಸಿಜಿ ಪರೀಕ್ಷೆಗಳು ನಡೆದವು. ಶಿಬಿರದಲ್ಲಿ ಒಟ್ಟು ಸುಮಾರು 80 ಮಂದಿ ಫಲಾನುಭವಿಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಯಿತು.