ಉಡುಪಿ: ಸೆ.5ರಂದು ನೇರ ಸಂದರ್ಶನ
ಉಡುಪಿ, ಆ.21: ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ವಿಮಾ/ ನೇರ ಪ್ರತಿನಿಧಿಗಳ ಆಯ್ಕೆಗಾಗಿ ಸೆ.5ರಂದು ಬೆಳಗ್ಗೆ 11 ಗಂಟೆಗೆ ನಗರದ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಆಸಕ್ತ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ, ಸ್ವ-ವಿವರ, ಎಸೆಸೆಲ್ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಪಾನ್ಕಾರ್ಡ್ ಇವುಗಳ ಮೂಲ ಹಾಗೂ ನಕಲು ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ ಅಂಚೆ ಅಭಿವೃದ್ಧಿ ಅಧಿಕಾರಿಗಳು, ಉಡುಪಿ ಅಂಚೆ ವಿಭಾಗ, ಉಡುಪಿ, ಮೊ.ನಂ: 9482914676ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story