ಉಡುಪಿ: ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಿ ಲಕ್ಷಾಂತರ ರೂ. ವಂಚನೆ
ಉಡುಪಿ, ಆ.10: ಉಡುಪಿ ಎಸ್ಬಿಐ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರುವ ಕೆ.ಅನಿತಾ ಅವರ ಎಸ್ಬಿ ಖಾತೆಯಿಂದ ಜು.14ರಿಂದ ಆ.2ರ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಅನಿತಾ ಅವರ ಗಮನಕ್ಕೆ ಬಾರದೇ 1,84,100ರೂ. ಹಣವನ್ನು ಯುಪಿಐ ಮೂಲಕ ವರ್ಗಾವಣೆ/ಕಳ್ಳತನ ಮಾಡಿ ವಂಚಿಸಿರುವುದಾಗಿ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Next Story