ಉಡುಪಿ: ಡೆಬಿಟ್ ಕಾರ್ಡ್ ಮಾಹಿತಿ ಪಡೆದು ಲಕ್ಷಾಂತರ ರೂ. ವಂಚನೆ
ಉಡುಪಿ, ಸೆ.26: ಡೆಬಿಟ್ ಕಾರ್ಡ್ ಮಾಹಿತಿ ಪಡೆದು ಲಕ್ಷಾಂತರ ರೂ. ಆನ್ಲೈನ್ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ಕರೀಮ್ ಎಂಬವರಿಗೆ ಸೆ.25ರಂದು ಅಪರಿಚಿತ ವ್ಯಕ್ತಿ ಮೊಬೈಲ್ ಕರೆ ಮಾಡಿ ತಾನು ಎಸ್ಬಿಐ ಕ್ರೆಡಿಟ್ ಕಾರ್ಡನ್ನು ಆಕ್ಟೀವೇಶನ್ ಮಾಡುವುದಾಗಿ ಹೇಳಿದ್ದು, ಬಳಿಕ ಡೆಬಿಟ್ ಕಾರ್ಡ್ ಮಾಹಿತಿ ಹಾಗೂ ಓಟಿಪಿ ಪಡೆದು ಕರೀಮ್ ಅವರ ಖಾತೆಯಿಂದ ಒಟ್ಟು 4,99,990ರೂ. ಹಣವನ್ನು ಆನ್ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡು, ಮೋಸ ಮಾಡಿರುವುದಾಗಿ ದೂರಲಾಗಿದೆ.
Next Story