ಉಡುಪಿ ಎಂಜಿಎಂ ಕಾಲೇಜಿನ ವಾರ್ಷಿಕ ಸಂಚಿಕೆ ’ಸನ್ಮತಿ’ ಬಿಡುಗಡೆ
ಉಡುಪಿ: ವಾರ್ಷಿಕಾಂಕಗಳು ಕಾಲೇಜು ಚಟುವಟಿಕೆಗಳ ಕೈಗನ್ನಡಿ. ಶೈಕ್ಷಣಿಕ ಸಾಂಸ್ಕೃತಿಕ ಕ್ರೀಡಾ ಸಾಧನೆಯ ದಾಖಲೆ. ನೆನಪುಗಳ ಬುತ್ತಿ ಹಾಗಾಗಿ ವಿದ್ಯಾರ್ಥಿಗಳು ಅಪಾರ ಓದಿನ ಹಿನ್ನಲೆಯಲ್ಲಿ ಹೆಚ್ಚು ಹೆಚ್ಚು ಬರವಣಿಗೆಯಲ್ಲಿ ತೊಡಗಿಸಿ ಕೊಳ್ಳಬೇಕು, ತಮ್ಮ ಸಂವೇದನೆಗಳನ್ನು ಸಮರ್ಥವಾಗಿ ನಿರೂಪಿಸುವ ಜಾಣ್ಮೆ ಬೆಳಸಿಕೊಳ್ಳಬೇಕು ಮತ್ತು ಉತ್ತಮ ಸಂವಹನ ಕೌಶಲ್ಯ ಹೊಂದಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಗೋಪಾಲ್ ಹೇಳಿದ್ದಾರೆ.
ಉಡುಪಿ ಎಂಜಿಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ವಾರ್ಷಿಕ ಸಂಚಿಕೆ ’ಸನ್ಮತಿ’ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ನಾಯ್ಕ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ, ಐಕ್ಯುಎಸಿ ಸಂಯೋಜಕ ಪ್ರೊ. ಶೈಲಜಾ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ರಮೇಶ್ ಕಾರ್ಲ, ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾ ಧಿಕಾರಿ ಡಾ. ಜಗದೀಶ್ ಶೆಟ್ಟಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಸುರೇಂದನಾಥ ಶೆಟ್ಟಿ, ಸಂಪಾದಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯನಿರ್ವಾಹಕ ಸಂಪಾದಕ ಡಾ.ಪುತ್ತಿ ವಸಂತ ಕುಮಾರ್ ಪ್ರಾಸ್ತಾವಿಕ ವಾಗಿ ಮಾತನಾಡಿದ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ವನಿತಾ ವಂದಿಸಿದರು. ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.