ಉಡುಪಿ: ಸೆ.23ರಂದು ಕಸ ವಿಲೇವಾರಿ ಇಲ್ಲ
ಸಾಂದರ್ಭಿಕ ಚಿತ್ರ
ಉಡುಪಿ, ಸೆ.21: ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸೆಪ್ಟಂಬರ್ 23ರಂದು ಕ್ರೀಡಾಕೂಟವನ್ನು ಆಯೋಜಿಸಲಾಗಿರುವುದರಿಂದ ಈ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story