ಉಡುಪಿ: ಸಂಜೀವಿನಿ ಸಮನ್ವಯ ಸಮಿತಿ ಸಭೆ
ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ತಾಲೂಕು ಪಂಚಾಯತ್ ಬ್ರಹ್ಮಾವರ ಇವರ ಸಹಯೋಗದಲ್ಲಿ ಬ್ರಹ್ಮಾವರ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ತಾಲೂಕು ಮಟ್ಟದ ಒಕ್ಕೂಟ, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಹಾಗೂ ಬ್ರಹ್ಮಾವರ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗಾಗಿ ಸಂಜೀವಿನಿ ಸಮನ್ವಯ ಸಭೆಯು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಂಜೀವಿನಿ ಯೋಜನೆಯ ಹಿರಿಯ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕ ಎಂ.ಕೆ.ಅಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಜೀವಿನಿ ಯೋಜನೆ ದುರ್ಬಲ ವರ್ಗದ ಜನರ ಮತ್ತು ಮಹಿಳಾ ಸಬಲೀಕರಣದ ಅತ್ಯುನ್ನತ ಯೋಜನೆಯಾಗಿದೆ. ಇದನ್ನು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗಳು ಪರಸ್ಪರ ಸಮನ್ವಯತೆಯಿಂದ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ ಯೋಜನೆಯ ಯೋಜನಾ ನಿರ್ದೇಶಕ ಪ್ರಶಾಂತ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಇಬ್ರಾಹಿಂಪುರ, ಜಿಲ್ಲಾ ಪಂಚಾಯತ್ ಸಹಾಯಕ ಅಧಿಕಾರಿ ಜೇಮ್ಸ್ ಡಿ ಸಿಲ್ವಾ, ತಾಲೂಕು ಒಕ್ಕೂಟದ ಕಾರ್ಯದರ್ಶಿ ಬೇಬಿ, ಎನ್.ಆರ್.ಎಲ್.ಎಂ ವ್ಯವಸ್ಥಾಪಕ ಅವಿನಾಶ್, ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜಿಲ್ಲಾ ವ್ಯವಸ್ಥಾಪಕಿ ನವ್ಯ ಸ್ವಾಗತಿಸಿ, ವಂದಿಸಿದರು.