ʼಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆʼ ಬಿಡುಗಡೆ
ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿ ದ್ದೇವೆ’ ಹೆಸರಿನ ಕಿರು ಹೊತ್ತಗೆಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಅಜ್ಜರಕಾಡು ಮೈದಾನದಲ್ಲಿ ಬಿಡುಗಡೆಗೊಳಿಸಿದರು.
ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಅವರು ಈ ಕೃತಿಯನ್ನು ಅನಾವರಣಗೊಳಿಸಿದರು.
ಈ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಕೆ.ಜಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.
Next Story