ಮಹಿಳಾ ತರಬೇತಿ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ನ.8: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ಕೌಶಾಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನೀಡಲು ಅರ್ಹ ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.
ಸಂಸ್ಥೆಗಳು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿ ಅಕ್ರಿಡಿಟೇಶನ್ ಹೊಂದಿರಬೇಕು ಹಾಗೂ ಸಂಸ್ಥೆ ಹೊಂದಿರುವ ಮೂಲಭೂತ ಸೌಕರ್ಯಗಳ ವಿವರ, ತರಬೇತಿ ನೀಡುವ ಚಟುವಟಿಕೆಗೆ ಸಂಬಂಧಿಸಿ ಸ್ಥಳಾವಕಾಶದ ಮಾಹಿತಿ, ಯಂತ್ರೋಪಕರಣಗಳ ವಿವರ, ಛಾಯಾಚಿತ್ರಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಮಾಹಿತಿಗಳನ್ನು ದ್ವಿ-ಪ್ರತಿಯೊಂದಿಗೆ ನವೆಂಬರ್ 20 ರ ಒಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಿ ಬ್ಲಾಕ್, ಮೊದಲನೇ ಮಹಡಿ, ರೂಂ ನಂ:204, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.