ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆ ಕುರಿತು ಕಾರ್ಯಾಗಾರ

ಉಡುಪಿ, ಸೆ.1: ರಾಷ್ಟ್ರೀಯ ಸೇವಾ ಯೋಜನೆ ಘಟಕ, ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಬಂಟಕಲ್ಲು ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲ ಯದ ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಘಟಕದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆ ಎಂಬ ವಿಷಯದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಗುರುವಾರ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಮಾತನಾಡಿ, ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆಯು ಭಾರತ ಸರಕಾರಕ್ಕೆ ಹಣಕಾಸು ನಿರ್ವಹಣಾ ವ್ಯವಸ್ಥೆಯನ್ನು ಸುಲಭ ಗೊಳಿಸಿದೆ. ಪಾವತಿ ಮತ್ತು ಲೆಕ್ಕಪತ್ರ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತದೆ. ಈ ವ್ಯವಸ್ಥೆಯು ವಿವಿಧ ಪಾಲುದಾರ ರಿಗೆ ನೈಜ ಸಮಯ, ಅರ್ಥ ಪೂರ್ಣ ಹಣಕಾಸು ನಿರ್ವಹಣೆಗೆ ಸಹಾಯಕವಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಪಿಇಎಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಕ್ಯಾತೇಗೌಡ ಎಸ್.ಪಿ., ಮುಂಡಾಜೆಯ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ, ಪಡುವ ಪದವಿ ಪೂರ್ವಕಾಲೇಜಿನ ಉಪನ್ಯಾಸಕ ಯತಿರಾಜ್ ಉಪಸ್ಥಿತರಿದ್ದರು.
ಈ ತರಬೇತಿಯಲ್ಲಿ ಪಿಂಚಣಿ, ಉದ್ಯೋಗಿಗಳ ಮಾಹಿತಿ ವ್ಯವಸ್ಥೆ, ತೆರಿಗೆಯೇತರ ರಶೀದಿ ಪೋರ್ಟಲ್, ಸಾರ್ವಜನಿಕ ಖಾತೆಗಳ ಕಛೇರಿ ಮತ್ತು ಬ್ಯಾಂಕಿಂಗ್‌ನಂತಹ ವಿವಿಧ ಹಣಕಾಸು ನಿರ್ವಹಣಾ ಸಾಮರ್ಥ್ಯದ ಬಗ್ಗೆ ಮಾಹಿತಿ ನೀಡಲಾ ಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದ ಗೋವಿಂದದಾಸ ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ಅನನ್ಯ ಮತ್ತು ಚಿನ್ಮಯಿ ಅವರನ್ನು ಸನ್ಮಾನಿಸಲಾಯಿತು.
ಪಿಪಿಸಿ ಅದಮಾರು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಜಯಶಂಕರ್ ಸ್ವಾಗತಿಸಿದರು. ಮಂಗಳೂರು ವಿಭಾಗದ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಇನ್ನಂಜೆ ಎಸ್‌ವಿಎಚ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪುಂಡರೀಕಾಕ್ಷ ಕೊಡಂಚ ವಂದಿಸಿದರು. ಈ ತರಬೇತಿ ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದರು.