ಹಸಿತ್ಯಾಜ್ಯ, ಒಣತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆಗೆ ಕಾರ್ಯಾಗಾರ

ಉಡುಪಿ: ಉಡುಪಿ ನಗರಸಭೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಉಡುಪಿ ಇವರ ಜಂಟಿ ಆಶ್ರಯದಲ್ಲಿ ವ್ಯಾಪಾರ ಸ್ಥರಿಗೆ ಹಸಿತ್ಯಾಜ್ಯ ಮತ್ತು ಒಣ ತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆ ಹಾಗೂ ಮಳೆ ನೀರು ಸಂರಕ್ಷಣೆ ಮತ್ತು ಜಲಮರು ಹೂರಣದ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸುವ ಮಾಹಿತಿ ಕಾರ್ಯಾಗಾರ ಆದಿಉಡುಪಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಿತು.
ನಗರಸಭೆ ಪೌರಾಯುಕ್ತ ರಾಯಪ್ಪ ಕಾರ್ಯಕ್ರಮ ಉದ್ಘಾಟಿಸಿ ವ್ಯಾಪಾರಸ್ಥರಿಗೆ ಹಸಿತ್ಯಾಜ್ಯ ಮತ್ತು ಒಣ ತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
ಉಡುಪಿ ನಗರಸಭೆಯ ಸ್ವಚ್ಚತೆಯ ರಾಯಭಾರಿ ಜೋಸೆಫ್ ಜಿ ರುಬೆಲ್ಲೋ ವ್ಯಾಪಾರಸ್ಥರಿಗೆ ಪ್ಲಾಸ್ಟಿಕ್‌ನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ಕಾರ್ಯಗಾರದಲ್ಲಿ ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕಿ ಗಾಯತ್ರಿ, ಉಡುಪಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ವ್ಯಾಪಾರಸ್ಥರು ಭಾಗವಹಿಸಿದ್ದರು.
Next Story