ಮಣಿಪುರದಲ್ಲಿ ಮಹಿಳೆಯರ ಬೆತ್ತಲೆಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಅಮಾನವೀಯ: ಎಸ್.ಐ.ಒ
ಸಾಂದರ್ಭಿಕ ಚಿತ್ರ (Photo: Twitter)
ಭಟ್ಕಳ: ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಹಾಗೂ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಅಮಾನವೀಯ, ಇಡೀ ಮನುಕುಲವೇ ತಲೆ ತಗ್ಗಿಸುವಂತಹ ಕೃತ್ಯ ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಭಟ್ಕಳ ಶಾಖೆ ಕಾರ್ಯದರ್ಶಿ ಮಷಾಯಿಕ್ ತಾಲಿಶ್ ಪತ್ರಿಕಾ ಪಕ್ರಟಣೆಯಲ್ಲಿ ತಿಳಿಸಿದ್ದಾರೆ.
ಕುಕಿ ಬುಡಕಟ್ಟು ಸಮುದಾಯದ ಹೆಣ್ಣು ಮಕ್ಕಳಿಗೆ ಆಗಿರುವ ಅವಮಾನ, ನೋವು ಮಾನಸಿಕ ಆಘಾತವನ್ನು ಊಹಿಸಲೂ ಸಾಧ್ಯವಿಲ್ಲ. ಮಣಿಪುರದಲ್ಲಿ ಸಂಘರ್ಷ ಆರಂಭಗೊಂಡು ಮೂರು ತಿಂಗಳಾಗಿದ್ದರೂ ಆಡಳಿತ ವ್ಯವಸ್ಥೆ ಕ್ರಮಕ್ಕೆ ಮುಂದಾಗದಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ, ಸಂಘರ್ಷವನ್ನು ನಿಯಂತ್ರಣಕ್ಕೆ ತಂದು ಮಹಿಳೆಯರು ಹಾಗೂ ಮಕ್ಕಳು ನೆಮ್ಮದಿಯಿಂದ ಜೀವನ ನಡೆಸುವ ವ್ಯವಸ್ಥೆ ಸೃಷ್ಟಿಯಾಗಬೇಕಾಗಿದೆ. ಮಣಿಪುರದಲ್ಲಿ ಮೊದಲು ಶಾಂತಿ ಮರು ಸ್ಥಾಪಿಸಬೇಕು. ಮಹಿಳೆಯರ ಘನತೆಯನ್ನು ಕೇವಲ ಘೋಷಣೆಗಳಿಂದ ಕಾಪಾಡಲು ಸಾಧ್ಯವಿಲ್ಲ. ಇಡೀ ಸಂಘರ್ಷದ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ ಎಸ್ ಐ. ಒ ಭಟ್ಕಳ ಕರ್ನಾಟಕವು ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಮಷಾಯಿಕ್ ತಾಲಿಶ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿದ್ದಾರೆ,