ಭಟ್ಕಳ: ಎ.26, 27ರಂದು ಅಂತರ ಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ

ಭಟ್ಕಳ: ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಪ್ರಥಮ ಬಾರಿಗೆ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಅಂತರ ಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಭಟ್ಕಳ ಮೀಡಿಯಾ ಕಪ್-2025 ಎ.26, 27 ರಂದು ನಡೆಯಲಿದೆ.
ಈ ಕುರಿತು ಮಾಹಿತಿ ನೀಡಿದ ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ ಅವರು, ಪಂದ್ಯಾವಳಿಗೆ ಭಟ್ಕಳ ಅರ್ಬನ್ ಬ್ಯಾಂಕ್ ನಿರ್ದೇಶಕಿ ಬೀನಾ ಮಂಕಾಳ ವೈದ್ಯ ಅವರು ಪ್ರಯೋಜಕತ್ವ ನೀಡಿದ್ದು, ಎಪ್ರಿಲ್ 26 ರಂದು ಬೆಳಿಗ್ಗೆ 9 ಗಂಟೆಗೆ ಸಚಿವ ಮಂಕಾಳ ಎಸ್ ವೈದ್ಯ ಅವರು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಎಸ್ಪಿ ಎಂ ನಾರಾಯಣ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೂ, ಜಿಲ್ಲಾ ವಾರ್ತಾಧಿಕಾರಿ ಶಿವಕುಮಾರ, ಸಹಾಯಕ ಆಯುಕ್ತೆ ಕಾವ್ಯಾರಾಣಿ ಕೆವಿ , ಡಿವೈಎಸ್ಪಿ ಮಹೇಶ, ತಹಸೀಲ್ದಾರ ನಾಗೇಂದ್ರ ಕೋಳಶೆಟ್ಟಿ, ಪುರಸಭೆ ಪ್ರಭಾರೆ ಅಧ್ಯಕ್ಷ ಅಲ್ತಾಪ್ ಖರೂರಿ, ಜಾಲಿ ಪಪಂ ಅಧ್ಯಕ್ಷೆ ಅಫ್ಸಾ ಹಝೈಪಾ ಗೌರವ ಉಪಸ್ಥಿತಿ ಹೊಂದಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ ಸುಬ್ರಾಯ ಭಟ್ ಬಕ್ಕಳ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಶೆಟ್ಟೆ, ಜಿಲ್ಲಾ ಪತ್ರಿಕಾ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷ ಟಿ ಬಿ ಹರಿಕಾಂತ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಆರ್ ಮಾನ್ವಿ ಪಾಲ್ಗೊಳ್ಳಲಿದ್ದಾರೆ. ಎಪ್ರಿಲ್ 27 ರ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಪಂದ್ಯಾವಳಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಮತ್ತು ಉಡಪಿ ಜಿಲ್ಲೆಗಳಿಂದ ಪತ್ರಕರ್ತರ ತಂಡ ಪಾಲ್ಗೊಳ್ಳಲಿದ್ದಾರೆಂದರು.
ಸಂಘ ಈಗಾಗಲೇ ಜನತೆಗಾಗಿ ಆರೋಗ್ಯ ಶಿಬಿರವನ್ನು ಯಶಸ್ವಿಯಾಗಿ ನಡೆಸಿದೆ. ಇದೀಗ ಪತ್ರಕರ್ತರಿಗಾಗಿ ಅಂತರಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿದ್ದು, ಇದರ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯವೆಂದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವಿಷ್ಣು ದೇವಡಿಗ ಪಂದ್ಯಾವಳಿಯ ಯಶಸ್ಸಿಗೆ ಕರೆ ನೀಡಿದರು. ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕ, ಖಚಾಂಚಿ ಮೋಹನ ನಾಯ್ಕ, ಸಹಕಾರ್ಯದರ್ಶಿ ಪ್ರಸನ್ನ ಭಟ್ಟ, ಸದಸ್ಯರಾದ ನಸೀಮುಲ್ ಘನಿ, ಉದಯ ನಾಯ್ಕ, ಶೈಲೇಶ ವೈದ್ಯ, ಅರ್ಜುನ್ ಮಲ್ಯ, ಈಶ್ವರ ನಾಯ್ಕ, ಲೋಕೇಶ ನಾಯ್ಕ ಮುಂತಾದವರಿದ್ದರು.