ಮುರ್ಡೇಶ್ವರದ ಕಡಲತೀರದಲ್ಲಿ ಪ್ರವಾಸಿಗರಿಗೆ ಎರಡು ದಿನ ಪ್ರವೇಶ ನಿರ್ಬಂಧ
ಸಾಂದರ್ಭಿಕ ಚಿತ್ರ (Credit:Facebook/Karnataka focus)
ಭಟ್ಕಳ: ಅರಬಿ ಸಮುದ್ರದಲ್ಲಿ ಚಂಡಮಾರುತದ ಲಕ್ಷಣಗಳ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಕಡಲತೀರಗಳಲ್ಲಿ ಎರಡು ದಿನಗಳ ಕಾಲ ಪ್ರವಾಸಿಗರ ಆಗಮನವನ್ನು ನಿಷೇಧಿಸಲಾಗಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ನಿನ್ನೆಯಿಂದ ಅರಬಿ ಸಮುದ್ರದಲ್ಲಿ ಒತ್ತಡ ಉಂಟಾಗಿದ್ದು, ಚಂಡಮಾರುತದ ಅಬ್ಬರ ಶುರುವಾಗಿದೆ.
ಹೊಸ ವರ್ಷದ ಆರಂಭದಿಂದಲೇ ಮುರ್ಡೇಶ್ವರ, ಗೋಕರ್ಣ, ಕಾರವಾರ ಮೊದಲಾದ ಕಡಲತೀರಗಳಲ್ಲಿ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಹೀಗಾಗಿ ಚಂಡಮಾರುತದ ಲಕ್ಷಣಗಳನ್ನು ಪರಿಗಣಿಸಿ ಮುನ್ನೆಚ್ಚರಿಕೆ ಕ್ರಮವಾಗಿ 500ಕ್ಕೂ ಹೆಚ್ಚು ಜೀವ ರಕ್ಷಕರನ್ನು ನಿಯೋಜಿಸಲಾಗಿದೆ.
Next Story