ಭಟ್ಕಳ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ರೈಲು ಢಿಕ್ಕಿ
ಸಾಂದರ್ಭಿಕ ಚಿತ್ರ
ಭಟ್ಕಳ: ರೈಲ್ವೇ ಪ್ಲಾಟ್ಫಾರ್ಮ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ರೈಲು ಢಿಕ್ಕಿ ಹೊಡೆದ ಘಟನೆ ಭಟ್ಕಳ ರೈಲುನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಹೆಬಳೆ ಗ್ರಾಪಂ ವ್ಯಾಪ್ತಿಯ ತೆಂಗಿನಗುಂಡಿ ನಿವಾಸಿ ದಾಸ ಈರಯ್ಯ ಮೊಗೆರ್ (42) ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ದಾಸರ ಕೈ ತುಂಡಾಗಿದ್ದು, ತಲೆಗೂ ಗಾಯವಾಗಿದೆ. ಕೂಡಲೇ ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಹೋಗುವ ರೈಲು ಭಟ್ಕಳ ರೈಲು ನಿಲ್ದಾಣಕ್ಕೆ ಬಂದಾಗ ಈ ಘಟನೆ ನಡೆದಿದೆ.
Next Story